ಮೆಟ್ರೋರಾಜಕೀಯರಾಜ್ಯ

ನೀವು ಬೇಕಾದರೂ ಸಿಎಂ ಸ್ಥಾನಕ್ಕೆ ಟ್ರೈ ಮಾಡಿ; ಮಾಧ್ಯಮದವರ ಮುಂದೆ ಡಿ ಕೆ ಶಿವಕುಮಾರ್ ನಗೆ ಚಟಾಕಿ

ಬೆಂಗಳೂರು: ಚುನಾವಣೆಗೆ ಸ್ಪರ್ಧಿಸುವ 224 ಜನರಲ್ಲಿ ಗೆಲ್ಲುವವರ ಜತೆಗೆ, ಸೋತವರು ಕೂಡ ಮುಖ್ಯಮಂತ್ರಿಯಾಗಿದ್ದನ್ನು ರಾಜ್ಯ ರಾಜಕೀಯದ ಇತಿಹಾಸದಲ್ಲಿ ನೋಡಿದ್ದೇವೆ. ದೇವರಾಜ ಅರಸು ಅವರು ಚುನಾವಣೆಯಲ್ಲಿ ಗೆದ್ದಿರಲಿಲ್ಲ, ಆದರೂ ಮುಖ್ಯಮಂತ್ರಿ ಆಗಲಿಲ್ಲವೇ? ರಾಮಕೃಷ್ಣ ಹೆಗಡೆ ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ, ಆದರೂ ಮುಖ್ಯಮಂತ್ರಿ ಆಗಲಿಲ್ಲವೇ? ನೀವು (ಮಾಧ್ಯಮದವರು) ಕೂಡ ಟ್ರೈ ಮಾಡಿ, ಒಂದು ಚಾನ್ಸ್ ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಗೆ ಚಟಾಕಿ ಹಾರಿಸಿದ್ದಾರೆ.

ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಎಂದು ಜೈಕಾರ ಹಾಕಿದ್ದರ ಬಗ್ಗೆ ಮಾಧ್ಯಮದವರು ಪ್ರಸ್ತಾಪಿಸಿದಾಗ ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದರು.

ಮೈಸೂರಿನ ಸುತ್ತೂರು ಶ್ರೀಗಳಿಗೆ ರಾಜಕೀಯ ಪಕ್ಷಗಳ ಭೇದ-ಭಾವವಿಲ್ಲ. ಎಲ್ಲ ಪಕ್ಷಗಳ ನಾಯಕರಿಗೂ ಕಷ್ಟಕಾಲದಲ್ಲಿ ಧೈರ್ಯ ತುಂಬಿ, ಆಶೀರ್ವಾದ ಮಾಡುತ್ತಾರೆ. ಅವರ ಪೂರ್ವಾಶ್ರಮದ ಮಾತೃಶ್ರೀ ಅವರು ತೀರಿಕೊಂಡಾಗ ಹೋಗಲು ಸಾಧ್ಯವಾಗಲಿಲ್ಲ. ಆನಂತರ ನಾನು ಹೋಗಿ ಭೇಟಿ ಮಾಡಿದ್ದೇನೆ. ಅದೇ ರೀತಿ ಪರಮೇಶ್ವರ್ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ ಎಂದರು.

ಅಶೋಕಣ್ಣ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ಎತ್ತಿಹಾಕಲಿ:

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ದುರ್ಬಲವಾಗಿದೆ. ಹೀಗಾಗಿ ಪಕ್ಷದಲ್ಲಿ ನಾಯಕತ್ವದ ವಿಚಾರವಾಗಿ ಚರ್ಚೆ ನಡೆಯುತ್ತಿದೆ ಎಂದು ಸಚಿವ ಅಶೋಕ್ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಉತ್ತರಿಸಿದ ಶಿವಕುಮಾರ್, ಅಶೋಕಣ್ಣ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ತೆಗೆದುಹಾಕಲಿ, ಆಮೇಲೆ ಬೇರೆಯವರ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button