ಅಬಕಾರಿ ಅಧಿಕಾರಿಗಳ ಭ್ರಷ್ಟಾಚಾರ; ಎಸಿಬಿಗೆ ರವಿ ಕೃಷ್ಣಾರೆಡ್ಡಿ ದೂರು

ಬೆಂಗಳೂರು: ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವ ಲ್ಗೊಂಡಿರುವ ಅಬಕಾರಿ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಎಸಿಬಿಗೆ ದೂರು ನೀಡಿದೆ.
ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳ ನಡುವಿನ ಮಾತುಕತೆ ಮತ್ತು ನಾಲ್ವರು ಅಧಿಕಾರಿಗಳು ಅಮಾನತು ಆಗಿರುವ ಹಿನ್ನೆಲೆಯಲ್ಲಿ, ಅಬಕಾರಿ ಮಂತ್ರಿಗೆ ತಿಂಗಳಿಗೆ ಒಂದೂವರೆ ಕೋಟಿ ರೂಪಾಯಿಗೂ ಹೆಚ್ಚು ಲಂಚವನ್ನು ಇಲಾಖೆ ಅಧಿಕಾರಿಗಳು ನೀಡಬೇಕು ಎನ್ನುವ ಆರೋಪಗಳ ವಿಚಾರವಾಗಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮಂಜುನಾಥ್ ಎಸ್ ಮತ್ತು ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್ ದೂರು ದಾಖಲಿಸಿದ್ದಾರೆ.
ಎಸಿಬಿಗೆ ದೂರು ನೀಡುವ ಮೂಲಕ ನಮ್ಮ ಕೆಲಸ ನಾವು ಮಾಡಿದ್ದೇವೆ. ಇನ್ನು ಎಸಿಬಿ ಹೇಗೆ ಕೆಲಸ ಮಾಡುತ್ತದೆ ಎನ್ನುವುದು ರಾಜ್ಯದ ಮತದಾರರ ಮೇಲೆ ಅವಲಂಬಿತವಾಗಿದೆ ಎಂದು ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದ್ದಾರೆ.