ಮೆಟ್ರೋರಾಜ್ಯ

ರಾಜ್ಯದ ಪರಿಸ್ಥಿತಿ ಅವಲೋಕಿಸಿ ಲಾಕ್‌ಡೌನ್‌ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದಲ್ಲಿ ಕೋವಿಡ್‌ 19 ಎರಡನೇ ಅಲೆ ನಿರೀಕ್ಷೆಗೂ ವ್ಯಾಪಿಸುತ್ತಿದೆ. ಈಗಾಗಲೇ ಘೋಷಣೆಯಾಗಿರುವಂತೆ ಜೂ.7ರವರೆಗೆ ಲಾಕ್‌ಡೌನ್‌ ಇರಲಿದ್ದು ಅಲ್ಲಿಯವರೆಗಿನ ಸ್ಥಿತಿಗತಿಗಳನ್ನು ಅವಲೋಕಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಹಾಸನ, ಮೈಸೂರು, ಬೆಳಗಾವಿ, ವಿಜಯಪುರ ಮತ್ತು ಕಲಬುರ್ಗಿ ಸಂಸದರು ಮತ್ತು ಶಾಸಕರ ಜತೆ ವಿಡಿಯೋ ಕಾನ್ಫರೆನ್ಸ್‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಪಾಸಿಟೀವ್‌ ಪ್ರಮಾಣ ಶೇ.10ಕ್ಕಿಂತ ಕುಸಿಯುವಂತೆ ಮಾಡಲು ಸೂಚಿಸಲಾಯಿತು. ಮರಣ ಪ್ರಮಾಣ ಶೇ.1.7 ಇದೆ, ಮರಣದ ಸಂಖ್ಯೆ ಕಡಿಮೆಯಾಗಬೇಕು. ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇ.60 ಪ್ರಕರಣಗಳು ವರದಿಯಾಗುತ್ತಿವೆ. ಈ ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸಬೇಕಾಗಿದೆ ಎಂದರು.
ಕೆಲ ದಿನಗಳಿಂದ ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್‌ ಬದಲು ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವಂತೆ ಮನವೊಲಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್‌ ನಿಯಂತ್ರಣದಲ್ಲಿ ಶಾಸಕರು ಮತ್ತು ಸಂಸದರು ತಮ್ಮ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಚಿಕಿತ್ಸಾ ಸೌಲಭ್ಯಗಳು, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ತಕ್ಕಂತೆ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲೂ ಸಮಸ್ಯೆ ಉದ್ಭವಿಸದಂತೆ ಸಂಪನ್ಮೂಲಗಳ ಸದ್ಬಳಕೆಯಾಗಬೇಕು ಎಂದು ಸಲಹೆ ನೀಡಿದರು.

ಪ್ರತೀ ತಾಲೂಕಿಗೆ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮನವಿ ಮಾಡಿದರು. ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂ.ಗಳನ್ನು ಕೋವಿಡ್‌ ನಿರ್ವಹಣೆಗೆ ಬಳಕೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಅಲ್ಲದೆ ಗ್ರಾಪಂ.ಗಳಿಗೆ ತಲಾ 50 ಸಾವಿರ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button