ಮೆಟ್ರೋ
ಬಿಎಂಟಿಸಿ ಪ್ರಯಾಣ ದರ ಏರಿಕೆಯಿಲ್ಲ; ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಸದ್ಯ ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಕೊರೊನಾ ಲಾಕ್ಡೌನ್ನಿಂದಾಗಿ ಜನರು ಮೊದಲೇ ಕಷ್ಟದಲ್ಲಿದ್ದಾರೆ. ಮತ್ತೆ ಅವರಿಗೆ ಕಷ್ಟ ಕೊಡಲು ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಯೋಚಿಸಲಾಗುವುದು ಎಂದು ಸವದಿ ಹೇಳಿದ್ದಾರೆ.
ಬಿಎಂಟಿಸಿ ದರ ಹೆಚ್ಚಿಸಲು ಅಧಿಕಾರಿಗಳು ಪ್ರಸ್ತಾವನೆ ಕೊಟ್ಟಿರುವುದು ನಿಜ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಜೂನ್ 14ರ ನಂತರ ಲಾಕ್ಡೌನ್ ಸಡಿಲ ಮಾಡಿದರೆ ಹಂತ ಹಂತವಾಗಿ ಸಾರಿಗೆ ಪ್ರಾರಂಭ ಮಾಡುತ್ತೇವೆ. ಪ್ರಯಾಣಿಕರ ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್, ಮಾಸ್ಕ್ ಎಲ್ಲವನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿಗೆ ಎರಡೂ ಡೋಸ್ ಲಸಿಕೆ ಆಗುವವರೆಗೂ ನಮ್ಮ ನೌಕರರಿಗೆ ಕೆಲಸಕ್ಕೆ ಬರಲು ಒತ್ತಡ ಹಾಕುವುದಿಲ್ಲ. ಎರಡನೇ ಡೋಸ್ ತೆಗೆದುಕೊಂಡವರಿಗೆ ರಕ್ಷಣೆ ಕೊಟ್ಟು ಸೇವೆ ಪ್ರಾರಂಭ ಮಾಡುತ್ತೇವೆ ಎಂದು ಸವದಿ ತಿಳಿಸಿದ್ದಾರೆ.