Breaking NewsLatestಬೆಂಗಳೂರುಬೆಂಗಳೂರು ಗ್ರಾಮಾಂತರಮೆಟ್ರೋಸುದ್ದಿ

ಟಿಕೆಟ್ ರಹಿತ ಪ್ರಯಾಣಿಕರಿಂದ ದಂಡ ವಸೂಲಿ

ಬೆಂಗಳೂರು: ಬಿಎಂಟಿಸಿ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು  ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಕಳೆದ ಏಪ್ರಿಲ್ ನಲ್ಲಿ  2671 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು 4.38 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 157 ಪುರುಷ  ಪ್ರಯಾಣಿಕರಿಂದ  ಒಟ್ಟು ರೂ. 15,700/-ನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ.

ಒಟ್ಟಾರೆ ಏಪ್ರಿಲ್-2022 ರ ಮಾಹೆಯಲ್ಲಿ 2828 ಪ್ರಯಾಣಿಕರಿಂದ ಒಟ್ಟು ರೂ.4,54,650/-  ದಂಡವನ್ನು ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಧೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ / ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ.

ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಅಧಿಕೃತ ಪ್ರಕಟಣೆ ತಿಳಿಸಿದೆ

Spread the love

Related Articles

Leave a Reply

Your email address will not be published.

Back to top button