Breaking NewsLatestಜಿಲ್ಲಾ ಸುದ್ದಿಬೆಂಗಳೂರುಬೆಂಗಳೂರು ಗ್ರಾಮಾಂತರಮೆಟ್ರೋರಾಜಕೀಯರಾಜ್ಯರಾಮನಗರಸುದ್ದಿ

ಡಿಕೆಶಿ ಬೆಂಬಲಿಗರಿಗೆ ನಟಿ ರಮ್ಯಾ ಮಾರುತ್ತರ, ಏನು ಹೇಳಿದ್ದಾರೆ ಗೊತ್ತಾ ?

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪರ ಟ್ವಿಟ್ ಮೂಲಕ ಬ್ಯಾಟ್ ಬೀಸಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ವಿರುದ್ಧ ಡಿ.ಕೆ.ಶಿವಕುಮಾರ್ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ತಿರುಗಿ ಬಿದ್ದಿದ್ದಾರೆ. ಇದರಿಂದ ಸಿಡಿಮಿಡಿಗೊಂಡಿರುವ ನಟಿ ರಮ್ಯಾ, ತಮ್ಮ ವಿರುದ್ಧ ಟ್ರೋಲ್ ಮಾಡಿರುವವರನ್ನು ಟ್ವೀಟ್ ಮೂಲಕ ಮಾರುತ್ತರ ನೀಡಿ ಲೇವಡಿ ಮಾಡಿದ್ದಾರೆ.


ಇದಕ್ಕೂ ಮೊದಲು ಸಚಿವ ಅಶ್ವತ್ಥನಾರಾಯಣ ತಮ್ಮನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲರನ್ನು ಭೇಟಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಬುಧವಾರ ಟ್ವೀಟ್ ಮಾಡಿದ್ದ ರಮ್ಯಾ, ಬೇರೆ ಬೇರೆ ಪಕ್ಷಗಳ ನಾಯಕರ ಕುಟುಂಬಗಳ ನಡುವೆ ಮದುವೆ ಸಂಬಂಧಗಳು ಏರ್ಪಟ್ಟಿವೆ. ಹಾಗಿರುವಾಗ, ಕಾಂಗ್ರೆಸ್ನ ಹಿರಿಯ ನಾಯಕ ಎಂ.ಬಿ. ಪಾಟೀಲ್ ಮತ್ತು ಅಶ್ವತ್ಥ ನಾರಾಯಣ ಅವರ ಭೇಟಿ ಬಗ್ಗೆ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವುದು ಅಚ್ಚರಿ ಎನಿಸುತ್ತಿದೆ. ಇವುಗಳನ್ನೆಲ್ಲ ಬಿಟ್ಟು ಕಾಂಗ್ರೆಸ್ ಪಕ್ಷದ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಬಾರದೇ?’ ಎಂದಿದ್ದರು.


ಈ ಹೇಳಿಕೆ ಬೆನ್ನಲ್ಲೇ ಟ್ವಿಟರ್ ಸೇರಿದಂತೆ ಅನೇಕ ಸಾಮಾಜಿಕ ಜಾಲತಾಣಗಳಲ್ಲಿ ಡಿಕೆಶಿ ಬೆಂಬಲಿಗರು ರಮ್ಯ ಅವರ ಅವಹೇಳನ ಮಾಡುವ ಟ್ವೀಟ್ ಮಾಡುತ್ತಿದ್ದಾರೆ. ಈ ಟ್ವೀಟ್ಗಳನ್ನು ಹಂಚಿಕೊಂಡಿರುವ ರಮ್ಯ ಅವರು ಡಿಕೆಶಿ ಬೆಂಬಲಿಗರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಕೆಪಿಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಅಧ್ಯಕ್ಷ ಬಿ.ಆರ್. ನಾಯ್ಡು ಅವರು, ‘ರಮ್ಯಾ ಅವರೇ ನಿಮಗೆ ಈಗ ಎಚ್ಚರವಾಯಿತಾ? ಇಷ್ಟು ದಿನ ಎಲ್ಲಿದ್ದಿರಿ? ನಟ ಅಂಬರೀಷ್ ಅವರು ನಿಧನರಾಗಿದ್ದಾಗ ಕೂಡ ನೀವು ಬಂದಿರಲಿಲ್ಲ. ದಯವಿಟ್ಟು ಇದನ್ನು ಮಂಡ್ಯದ ಮತದಾರರಿಗೆ ತಿಳಿಸುವಿರಾ?’ ಎಂದು ಕೇಳಿದ್ದರು.
ಇದೇ ಟ್ವೀಟ್ನ್ನು ರಿಟ್ವೀಟ್ ಮಾಡಿ ಬಿ.ಆರ್. ನಾಯ್ಡು ಅವರಿಗೆ ರಮ್ಯಾ ತಿರುಗೇಟು ನೀಡಿದ್ದಾರೆ. ‘ಗುಡ್ ಕಾಪಿ ಪೇಸ್ಟ್ ಜಾಬ್’ (ನಕಲು ಮಾಡುವುದು) ಎಂದು ಕಿಚಾಯಿಸಿದ್ದಾರೆ.


ನನ್ನನ್ನು ಟ್ರೋಲ್ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಪಕ್ಷದ ಕಚೇರಿಯಿಂದ ಈ ರೀತಿಯ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ನಿಮಗೆ ಆ ತೊಂದರೆ ಬೇಡ. ನಾನೇ ನನ್ನನ್ನು ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ನ ರಾಷ್ಟ್ರೀಯ ಪ್ರಚಾರ ಸಮಿತಿ ಮುಖ್ಯಸ್ಥ ಶ್ರೀವಸ್ತ ವೈ ಬಿ ಅವರನ್ನು ಟ್ಯಾಗ್ ಮಾಡಿ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

Spread the love

Related Articles

Leave a Reply

Your email address will not be published.

Back to top button