
ನವದೆಹಲಿ: ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಇರುವ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ದೇಹದ ಹಲವಾರು ಭಾಗಗಳು ಪತ್ತೆಯಾಗಿರುವುದರಿಂದ ಸತ್ತವರ ಸಂಖ್ಯೆ ಹೆಚ್ಚಾಗಬಹುದು ಎಂದು ಅವರು ಮಾಹಿ ನೀಡಿದ್ದಾರೆ.
ಬೆಂಕಿ ನಂದಿಸಲು ಸುಮಾರು 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಕ್ತಾಗೊಳಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಎನ್ ಡಿ ಆರ್ ಎಫ್ ತಂಡ ಕೂಡ ಸ್ಥಳಕ್ಕೆ ತಲುಪಿದೆ.
ಈವರೆಗೆ 50ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಅಗ್ನಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ದೆಹಲಿ ಡಿಸಿಪಿ ಸಮೀರ್ ಶರ್ಮಾ ತಿಳಿಸಿದ್ದಾರೆ. ಜನರನ್ನು ಸ್ಥಳಾಂತರಿಸುವುದು ಮತ್ತು ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆ ನೀಡುವುದು ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಘಟನೆ ಅತ್ಯಂತ ದುಃಖಕರ ಎಂದಿದ್ದಾರೆ.40
ಬೆಂಕಿ ಅವಘಡ ಸಂಭವಿಸಿದ ವಾಣಿಜ್ಯ ಕಟ್ಟಡದ ಮಾಲೀಕರನ್ನು ಬಂಧಿಸಲಾಗಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ. ನಿರ್ಲಕ್ಷ್ಯದ ಪರಿಣಾಮ ಬೆಂಕಿ ಅವಘಡವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ಪ್ರಧಾನಿಯಿಂದ 2 ಲಕ್ಷ ಪರಿಹಾರ ಘೋಷಣೆ
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಸಿದ್ದಾರೆ.