Breaking NewsLatestಕ್ರೈಂಬೆಂಗಳೂರುಮೆಟ್ರೋರಾಜ್ಯಸುದ್ದಿ

ಯುವತಿ ಮೇಲೆ ಆಸಿಡ್ ಪ್ರಕರಣ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ: ಆರಗ ಜ್ಞಾನೇಂದ್ರ

ಬೆಂಗಳೂರು: ಯುವತಿಯ ಮೇಲೆ ಆಸಿಡ್ ಎರಚಿ ಕೊಲೆಗೆ ಯತ್ನಿಸಿದ ಆರೋಪಿ ನಾಗೇಶ್ ನನ್ನು ತಮಿಳುನಾಡು ಪೊಲೀಸರ ನೆರವಿನೊಂದಿಗೆ ಕರ್ನಾಟಕ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಸುದ್ದಿ ಸಂಸ್ಥೆ ಎಎನ್ ಐಗೆ ತಿಳಿಸಿದ್ದಾರೆ.

ಚಿಕಿತ್ಸೆಯಲ್ಲಿರುವ ಸಂತ್ರಸ್ತೆಯ ಕುಟುಂಬಕ್ಕೆ ಇದು ಒಂದಷ್ಟು ಸಾಂತ್ವಾನ ನೀಡಬಹುದು ಎಂದು ಅವರು ಹೇಳಿದ್ದಾರೆ. 17 ದಿನಗಳ ಹಿಂದೆ ಬೆಂಗಳೂರಿನ ಸುಂಕದ ಕಟ್ಟೆಯಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಆರೋಪಿ ಆ್ಯಸಿಡ್ ಎರಚಿ ಪರಾರಿಯಾಗಿದ್ದನು.

ತಮಿಳುನಾಡಿನಲ್ಲಿ ಸ್ವಾಮೀಜಿ ವೇಷದಲ್ಲಿದ್ದ ಆರೋಪಿ ನಾಗೇಶ್ ನನ್ನು ಪೊಲೀಸರು ಉಪಾಯ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.  ಬೆಂಗಳೂರಿಗೆ ಕರೆ ತರುವ ವೇಳೆ ಎಸ್ಕೇಪ್ ಆಗಲು ಪಯತ್ನಿಸಿದ್ದ ನಾಗೇಶನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಗುಂಡೇಟು ನೀಡಿದ್ದು, ಸದ್ಯ ನಾಗೇಶ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Spread the love

Related Articles

Leave a Reply

Your email address will not be published.

Back to top button