Breaking NewsLatestರಾಜಕೀಯರಾಷ್ಟ್ರೀಯಸುದ್ದಿ

ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ, 75 ಸಾವಿರ ಮಾತ್ರ ಭರ್ತಿ: ಮಲ್ಲಿಕಾರ್ಜುನ ಖರ್ಗೆ

ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಹೇಳಿದ್ದಾರೆ.

75,000 ಹುದ್ದೆಗಳಷ್ಟೇ ಪ್ರಧಾನಿ ಭರ್ತಿ ಮಾಡಿದ್ದಾರೆ.ಕೇಂದ್ರ ಸಚಿವಾಲಯ ಸೇವೆ ಕಚೇರಿಗಳಲ್ಲಿ 1,600ರಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮ ವರದಿಯನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಹಾಗೆ ನಡೆದುಕೊಂಡಿದ್ದರೆ ಎಂಟು ವರ್ಷಗಳಲ್ಲಿ 16 ಕೋಟಿ ಹುದ್ದೆ ಸೃಷ್ಟಿಯಾಗಬೇಕಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಖುದ್ದೆಗಳು ಖಾಲಿ ಇವೆ. ಪ್ರಧಾನಿ 75,000 ನೇಮಕಾತಿ ಪತ್ರಗಳನ್ನು ಮಾತ್ರ ವಿತರಿಸಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button