Breaking NewsLatestಕ್ರೈಂಜಿಲ್ಲಾ ಸುದ್ದಿತುಮಕೂರು
25 ವರ್ಷ ವಯಸ್ಸಿನ ಯುವತಿಯನ್ನ ಮದುವೆಯಾಗಿ ಸದ್ದು ಮಾಡಿದ್ದ 45 ವರ್ಷದ ಶಂಕರ್ ಸಾವು

25 ವರ್ಷದ ಯುವತಿಯನ್ನ ಮದುವೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿದ್ದ 45 ವರ್ಷದ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದಲ್ಲಿ 2021ರ ಆಕ್ಟೋಬರ್ 19ರಂದು 25 ವರ್ಷದ ಮೇಘನಾರನ್ನ 45 ವರ್ಷದ ಶಂಕರ್ ಮದುವೆಯಾಗಿದ್ದರು. ಇವರ ಮದುವೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆದ್ರೆ ಇದೀಗ ಶಂಕರ್ ನೇಣು ಬಿಗಿದುಕೊಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರ್ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶಂಕರ್ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದ ಮೇಘನಾ ಪತಿಯ ಶವದ ಮುಂದೆ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿದೆ. ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ.