Breaking NewsLatestಮನರಂಜನೆರಾಜ್ಯಸಿನಿಮಾಸುದ್ದಿ

ರಮ್ಯಾಗೆ ಯಾರು ಹೆಚ್ಚು ಇಂಪಾರ್ಟೆನ್ಸ್ ಕೊಡಬಾರದು: ಹ್ಯಾರಿಸ್ ನಲಪಾಡ್

ಮಂಗಳೂರು: ಕಳೆದೆರಡು ದಿನಗಳಿಂದ ನಟಿ ರಮ್ಯಾ ಟ್ವೀಟ್ ವಾರ್ ಜೋರಾಗಿಯೇ ಇದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಹಮದ್ ಹ್ಯಾರಿಸ್ ನಲಪಾಡ್ ವಿರುದ್ಧ ನಟಿ ರಮ್ಯಾ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇದೀಗ ರಮ್ಯಾ ಟ್ವೀಟ್ ನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಹ್ಯಾರಿಸ್ ನಲಪಾಡ್ ಖಂಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಲಪಾಡ್, ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ.ಇಷ್ಟು ತಿಂಗಳು,ಇಷ್ಟು ವರ್ಷ ರಮ್ಯಾ ಎಲ್ಲಿದ್ದರು?ಎಲ್ಲೂ ಇಲ್ಲದ ರಮ್ಯಾ ಸಡನ್ನಾಗಿ ಯಾಕೆ ಬಂದಿದ್ದಾರೆ. ರಮ್ಯಾ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ? ನಾನು ಒಬ್ಬಳು ಇದೀನಿ ಅಂತಾ ತೋರಿಸಿಕೊಳ್ಳುತ್ತಿದ್ದಾರಾ? ಯಾವುದಾದರೂ ಒಂದು ಕುರ್ಚಿ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರಾ. ರಮ್ಯಾ ಬಂದದ್ದು ಯಾಕೆ ಹೀಗೆಲ್ಲಾ ಮಾಡುತ್ತಿರುವುದು ಯಾವುದಕ್ಕೆ ಅಂತ ನಾವು ಅರ್ಥ ಮಾಡಿಕೊಳ್ಳಬೇಕು ಎಂದು ನಲಪಾಡ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಈ ವಿಚಾರದಲ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಎಂಬಿ ಪಾಟೀಲ್ ಅಶ್ವತ್ ನಾರಾಯಣ್ ಭೇಟಿ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದ್ದಾರೆ. ಹೌದಪ್ಪ. ಬಂದಿರಬಹುದು ರಕ್ಷಣೆಗೋಸ್ಕರ ಎಂದು ಹೇಳಿದ್ದಾರೆ. ಎಂ.ಬಿ.ಪಾಟೀಲ್ ಹೋಗಿದ್ದಾರೆ ಎಂದು ಎಲ್ಲೂ ಡಿಕೆ ಶಿವಕುಮಾರ್ ಹೇಳಿಲ್ಲ. ಕಾಂಗ್ರೆಸ್‌ ನ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ ಎಂದರು.

ರಮ್ಯಾ ಸುಮ್ಮನೆ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ. ರಮ್ಯಾ ಎಲ್ಲರ ಗಮನ ಅವರ ಕಡೆಗೆ ಕೇಂದ್ರಿಕರಿಸಲು ನೋಡುತ್ತಿದ್ದಾರೆ. ರಮ್ಯಾ ನಾನು ಇನ್ನೂ ಇದ್ದೀನಿ ಎಂದು ತೋರಿಸಿ ಕೊಳ್ಳುತ್ತಿರಬಹುದು. ನನಗೂ ಒಂದು ಕುರ್ಚಿ ಕೊಡಿ ಎಂದು ಟವಲ್ ಹಾಕುತ್ತಿರಬಹುದು. ಈ ವಿಚಾರಕ್ಕೂ ರಮ್ಯಾಗೂ ಏನು ಸಂಬಂಧ? ರಮ್ಯಾ ಅವರ ಹಳೆಯ ಟ್ವೀಟ್ ಗಳನ್ನು ತೆಗೆದುಕೊಂಡು ನೋಡಿ. ಯಾವುದೋ ಸಿನಿಮಾಗಳ ಬಗ್ಗೆ ಮಾತ್ರ ಟ್ವೀಟ್ ಮಾಡಿಕೊಂಡಿದ್ದರು.ಇತ್ತೀಚಿಗೆ ಅವರು ಯಾವುದೇ ರಾಜಕೀಯ ಟ್ವೀಟ್ ಗಳನ್ನು ಮಾಡಿಲ್ಲ. ರಮ್ಯಾ ಸಡನ್ನಾಗಿ ಯಾಕೆ ನಮ್ಮ ನಾಯಕರ ಮೇಲೆ ಬಿದ್ದಿದ್ದಾರೆ.ಇದರಲ್ಲಿ ಯಾವುದೋ ಒಳ ಉದ್ದೇಶ ಇದೆ. ನಟಿ ರಮ್ಯಾಗೆ ಯಾರು ಹೆಚ್ಚು ಇಂಪಾರ್ಟೆನ್ಸ್ ಕೊಡಬಾರದು ಎಂದರು.

Spread the love

Related Articles

Leave a Reply

Your email address will not be published.

Back to top button