Breaking NewsLatestಮೆಟ್ರೋ
ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಛಲವಾದಿ ಪಾಳ್ಯದ ಪ್ಲವರ್ ಗಾರ್ಡನ್ ಬಳಿ ನಡೆದಿದೆ.
ಬೆಳಿಗ್ಗೆ ಪ್ಲವರ್ ಗಾರ್ಡನ್ ಬಳಿ ಪುಡ್ ಕಿಟ್ ಹಂಚುವ ವೇಳೆ ಬಂದ ದುಷ್ಕರ್ಮಿಗಳು ಏಕಾಏಕಿ ರೇಖಾ ಅವರ ಮೇಲೆ ಮಚ್ಚು ಬೀಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರೇಖಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇನ್ನೂ ಕುಟುಂಬದ ಕಲಹದ ಹಿನ್ನೆಲೆ ರೇಖಾ ಕದಿರೇಶ್ ಕೊಲೆಯಾಗಿರುವ ಶಂಕ್ಯೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕದಿರೇಶ್ ಅವರ ಎರಡನೇ ಪತ್ನಿಯಾಗಿದ್ದ ರೇಖಾ ಮೊದಲೇ ಪತ್ನಿ ನಡುವೆ ಕಲಹ ಉಂಟಾಗಿತ್ತು. ಹೀಗಾಗಿ ಸಂಬಂಧಿಕರಿಂದಲೇ ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಸದ್ಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.