Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಬಗ್ಗೆ ಹೈಕೋರ್ಟ್ ಹಲವು ದಿನಗಳಿಂದ ಅಧಿಕಾರಿಗಳಿಗೆ ಚಾಟಿ ಬೀಸುತ್ತಲೇ ಇದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಹಾಜರಾಗಿದ್ದಾರೆ.

‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಏನಾದರೂ ಕಷ್ಟಗಳಿವೆಯೇ? ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಪಿಎಂ ಬಂದಾಗ ಮಾಡಿದ ರಸ್ತೆಗಳು ಹಾಳಾಗಿರುವ ವರದಿಗಳಿವೆ’ ಎಂದು ಹೈಕೋರ್ಟ್ ಆಕ್ಷೇಪಿಸಿತು.

Spread the love

Related Articles

Leave a Reply

Your email address will not be published.

Back to top button