Breaking NewsLatestರಾಜಕೀಯರಾಜ್ಯ
ಬಿ ವೈ ವಿಜಯೇಂದ್ರ ದಿಢೀರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಮತ್ತೆ ಕುತೂಹಲ

ಬೆಂಗಳೂರು : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ದೆಹಲಿಗೆ ತೆರಳಿದ್ದಾರೆ. ಅವರ ದಿಢೀರ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ವಿಜಯೇಂದ್ರ ದೆಹಲಿಗೆ ದಿಢೀರ್ ತೆರಳಿರುವುದು ಹಲವು ರೀತಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ವಿಜಯೇಂದ್ರ ಖಾಸಗಿ ವಿಷಯದ ಮೇಲೆ ದೆಹಲಿಗೆ ತೆರಳಿರುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಬುಧವಾರ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರೆಸಾರ್ಟ್ವೊಂದರಲ್ಲಿ ಭೇಟಿ ಮಾಡಿದ್ದರು. ಇದಾದ ಮಾರನೇ ದಿನವೇ ವಿಜಯೇಂದ್ರ ದೆಹಲಿಯತ್ತ ಹೊರಟಿರುವುದು ಬಿಜೆಪಿ ವಲಯದಲ್ಲೂ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.