Breaking NewsLatestಚಿಕ್ಕಮಗಳೂರುಜಿಲ್ಲಾ ಸುದ್ದಿ

ಮೇ18ರಂದು ಬೊಮ್ಮಾಯಿ ಚಿಕ್ಕಮಗಳೂರು ಭೇಟಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇ 18ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಜಿಲ್ಲೆಯ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ, ಆದಿಚುಂಚನಗಿರಿ ಮಹಾವಿದ್ಯಾಲಯದಲ್ಲಿ ನೆಯುವ ಕಾರ್ಯಕ್ರಮದಲ್ಲಿ ಪಾಳ್ಗೊಂಡು ನಂತರ ಬಸವತತ್ವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪಿಡಬ್ಲೂಡಿ ಇಲಾಖೆಯಿಂದ 9.8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅರಣ್ಯ ಭವನದ 30 ಕೋಟಿ ವೆಚ್ಚದ ಜಿಲ್ಲಾ ಕಚೇರಿ ಸಂಕೀರ್ಣದ ಶಂಕುಸ್ಥಾಪನೆ, ನೂತನ ಪ್ರವಾಸಿ ಮಂದಿರ ಉದ್ಘಾಟನೆ ನೆರವೇರಿಸಲಿದ್ದಾರೆ.

ಸಖರಾಯಪಟ್ಟಣದಲ್ಲ ನಿರ್ಮಿಸಲಾಗಿರುವ ಐಟಿಐ ಕಾಲೇಜನ್ನು ಉದ್ಘಾಟಿಸಲಿರುವ ಸಿಎಂ ಕಲ್ಯಾಣನಗರದ ಬಳಿ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹಿಳಾ ಕ್ರೀಡಾ ವಿದ್ಯಾರ್ಥಿನಿಲಯ, 3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹಿಳಾ ಕ್ರೀಡಾ ವಿದ್ಯಾರ್ಥಿನಿಲಯ, 3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಫುಟ್ಬಾಲ್ ಅಂಕಣ, ಶೃಂಗೇರಿಯಲ್ಲಿ 24.22 ಕೋಟಿ ರೂ.ಹಾಗೂ ಕಳಸದಲ್ಲಿ 22.97 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳನ್ನು ಉದ್ಘಾಟಿಸಲಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದ ಉದ್ಘಾಟನೆ, ಪಿಡಬ್ಲೂಡಿಯಿಂದ ಪ್ರತೀ ಗಾಮದಲ್ಲಿ ಒಟ್ಟು 15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಐ ಭವನಗಳಿಗೆ ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ. ಒಟ್ಟು 14.5ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 4 ಸೇತುವೆ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 16 ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನರೇಗಾ ಯೋಜನೆಯಡಿ ಸುಮಾರು 170 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲೆ, ಅಂಗನವಾಡಿ, ವಿದ್ಯಾರ್ಥಿ ನಿಲಯಗಳೀಗೆ ಅವರು ಸಾಂಕೇತಿಕ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಅಧಿಕಾರಿಗಳ ಸಭೆ ನಡೆಸಿದ್ದು, ಜಿಪಂ ಸಿಇಒ ಪ್ರಭು, ಜಿಲ್ಲಾ ರಕ್ಷಣಾಧಿಕಾರಿ ಅಕ್ಷಯ್ ಮತ್ತಿತರರು ಹಾಜರಿದ್ದರು.

Spread the love

Related Articles

Leave a Reply

Your email address will not be published.

Back to top button