Breaking NewsLatestಕಲಬುರ್ಗಿಜಿಲ್ಲಾ ಸುದ್ದಿ

ಮಹಾರಾಷ್ಟ್ರದಲ್ಲಿ ಡೆಲ್ಟಾಪ್ಲಸ್ ಉಲ್ಬಣ: ಕಲಬುರ್ಗಿಯಲ್ಲಿ ಹೆಚ್ಚಿದ ಆತಂಕ

ಕಲಬುರಗಿ: ನೆರೆಯ ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳ ತೀವ್ರ ಹೆಚ್ಚಳವಾಗಿದ್ದು, ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿಭಾಗ ಕಲಬುರಗಿ ಜಿಲ್ಲೆಯಾಗಿದ್ದು, ಲಾಕ್‌ಡೌನ್ 2.0 ಓಪನ್ ಆದಮೇಲೆ ಕಲಬುರಗಿಯಿಂದ ಮಹಾರಾಷ್ಟ್ರದ ಸೊಲ್ಲಾಪುರ, ಉಮ್ಮರಗಾ, ಸಾಂಗ್ಲಿ, ಮಿರಜ್‌ಗೆ ನಿತ್ಯವೂ ಬಸ್ ಗಳು ಓಡಾಟ ನಡೆಸಿವೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರದಿಂದ ಬರುವವರಿಂದ ಕಲಬುರಗಿ ಜಿಲ್ಲೆಗೂ ಸೋಂಕು ಹರಡುವ ಭೀತಿ ಎದುರಾಗಿದೆ‌‌.

ಈ ನಿಟ್ಟಿನಲ್ಲಿ ಜಿಲ್ಲಾಢಳಿತ ಜಾಗ್ರವಾಗಿದ್ದು, ಜಿಲ್ಲಾ ಪ್ರವೇಶ ಮಾಡುವ ಗಡಿ ಭಾಗದಲ್ಲಿ ಚಕ್‌ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಮಹಾರಾಷ್ಟ್ರದಿಂದ ಬರುವ ಪ್ರತಿಯೊಬ್ಬರಿಗೂ RTPCR ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಜಿಲ್ಲಾಢಳಿತ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ನಿತ್ಯ ನೂರಾರು ಸಂಖ್ಯೆಯಲ್ಲಿ ಜನ ವರದಿ ಇಲ್ಲದೆ ಜಿಲ್ಲೆಯನ್ನು ಪ್ರವೇಶ ಮಾಡುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಸಂಖ್ಯೆ ಹೆಚ್ಚಳವಾಗುವ ಆತಂಕ ಎದುರಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button