Breaking Newsರಾಜ್ಯ
ಗೊಂದಲ ನಿವಾರಿಸದೆ ಪಿಯುಸಿ ಫಲಿತಾಂಶ ಪ್ರಕಟಿಸಬೇಡಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ರಿಪೀಟರ್ಸ್ ಗಳನ್ನು ಉತ್ತೀರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಅನುಸರಿಸುತ್ತಿರುವ ಭಿನ್ನ ಮಾನದಂಡವನ್ನು ಅರ್ಜಿದಾರರು ಪ್ರಶ್ನಿಸಿರುವುದರಿಂದ ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ಆದೇಶ ಹೊರಬಿದ್ದಿದೆ.
ಎಲ್ಲ ವಿಭಾಗದ ವಿದ್ಯಾರ್ಥಿಗಳನ್ನು ಒಳಗೊಳ್ಳುವ ಕುರಿತು ಸಮಗ್ರ ನಿರ್ಧಾರ ಕೈಗೊಂಡು ಗೊಂದಲ ನಿವಾರಿಸುವವರೆಗೆ ಹೊಸ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಕೂಡದು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ವಿ.ನಾಗರತ್ನ ಹಾಗೂ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಫಲಿತಾಂಶಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಪೀಠಕ್ಕೆ ವಿವರಿಸಲಾಗಿದೆ.