ಸುಪ್ರೀಂ ಕೋರ್ಟ್ನಲ್ಲಿ ಎಫ್ಐಆರ್ ರದ್ದು ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಕೆ

ಧಾರವಾಡ : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಈ ಹಿಂದೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಲಿದೆ.
ಕಳೆದ ತಿಂಗಳು ಮೇ.28 ರಂದು ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ ವಿನಯ್ ಕುಕರ್ಣಿ ಅರ್ಜಿ ಸಲ್ಲಿಸಿದರು. ಆ ಅರ್ಜಿಯ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್ನ ತ್ರಿ ಸದಸ್ಯ ಪೀಠದ ಗೌರವಾನ್ವಿತ ನ್ಯಾಧೀಶರುಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಹಾಗೂ ಅನಿರುದ್ಧ ಭೋಸ್ ಎದುರು ವಿಚಾರಣೆ ಬರಲಿದೆ. ಇನ್ನು ಈ ಹಿಂದೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡ ಜಿಲ್ಲಾ ಮೂರನೇ ಹೆಚ್ಚುವರಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್, ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದ ಸೇರಿದಂತೆ ಬೆಂಗಳೂರು ಹೈಕೋರ್ಟ್ ನಲ್ಲಿ ಮಾಜಿ ಸಚಿವರ ಜಾಮೀನು ಅರ್ಜಿಗಳು ತಿರಸ್ಕರಿಸಲಾಗಿತ್ತು.

ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಈಗ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗ ಸುಪ್ರೀಂ ಕೋರ್ಟ್ ಬಾಗಿಲು ತಟ್ಟಿದ್ದು, ಆದರೆ ಇಲ್ಲಿ ಜಾಮೀನಿಗೆ ಅರ್ಜಿ ಹಾಕದೇ ನೇರವಾಗಿ, ಸಿಬಿಐ ದಾಖಲು ಮಾಡಿರುವ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ, ಸದ್ಯ ಮಾಜಿ ಸಚಿವ ವಿನಯಯ್ ಕುಲಕರ್ಣಿ ಪರ ನ್ಯಾಯವಾದಿಗಳು ಹಾಗೂ ಸಿಬಿಐ ಪರ ವಕೀಲರು ವಾದ ಮಂಡಿಸಲ್ಲಿದ್ದು, ವಾದ ಪ್ರತಿವಾದ ನಂತರವಷ್ಟೇ ಮಾಜಿ ಸಚಿವರ ಅರ್ಜಿಯ ವಿಚಾರಣೆ ಮಾಹಿತಿ ತೀಳಿದು ಬರಬೇಕಾಗಿದೆ.
ಕಳೆದ ವರ್ಷ ಅಂದರೆ 2020 ನವೆಂಬರ್ 5 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು, ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಿನಯ ಕುಲಕರ್ಣಿ ಅವರನ್ನು ಬಂಧನ ಮಾಡಿತ್ತು, ನಂತರ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ಈಗ ಮಾಜಿ ವಿನಯ್ ಕುಲಕರ್ಣಿ ಅವರು ಕಳೆದ ಏಳುವರೇ ತಿಂಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.