Breaking NewsLatestಕೋಲಾರಚಾಮರಾಜನಗರಚಿಕ್ಕಬಳ್ಳಾಪುರಜಿಲ್ಲಾ ಸುದ್ದಿಬೆಂಗಳೂರುಬೆಂಗಳೂರು ಗ್ರಾಮಾಂತರಮಂಡ್ಯಮೈಸೂರುರಾಮನಗರಶಿವಮೊಗ್ಗಹಾಸನ
ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ

ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಯಾಗಲಿದೆ. ಕರ್ನಾಟಕದಲ್ಲಿ ಡಿಸೆಂಬರ್ 9ರಿಂದ 12ರವರೆಗೆ ಭಾರಿ ಮಳೆಯಾಗಲಿದೆ. ಡಿಸೆಂಬರ್ 8 ರಂದು ಬೆಂಗಳೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.
ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.