ಡಿಸೆಂಬರ್ 5ರಿಂದ 9ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕ ದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 05 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
ಡಿಸೆಂಬರ್ 9ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ದಾವಣಗೆರೆಯಲ್ಲಿ ಅತಿ ಕನಿಷ್ಠ ಉಷ್ಣಾಂಶ 13.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.