Breaking NewsLatestರಾಜ್ಯಸುದ್ದಿ

ನಾಗೇಶನನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಗೃಹ ಸಚಿವರು

ಬೆಂಗಳೂರು: ಕಳೆದ 16 ದಿನಗಳಿಂದ ತಮಿಳುನಾಡಿನಲ್ಲಿ ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಧನ್ಯವಾದ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಯುವತಿಯ ಮೇಲೆ ಆ್ಯಸಿಡ್ ಎರಚುವಿಕೆಯಂತಹ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಕಿರಾತಕ ನಾಗೇಶ್ ಎಂಬ ಆರೋಪಿಯನ್ನು ನಮ್ಮ ಪೊಲೀಸರು, ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ನೆರೆಯ ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ನಮ್ಮ ಪೊಲೀಸರು, ದೇಶದಲ್ಲಿಯೇ ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತನೆ. ಇತ್ತ ಹೀನ ಕೃತ್ಯ ನಡೆಸಿದವನನ್ನು ಬಂಧಿಸುವ ಕಾರ್ಯದಲ್ಲಿ ತಮಿಳುನಾಡು ಪೊಲೀಸರು ನಮ್ಮ ಪೊಲೀಸರಿಗೆ ನೆರವಾಗಿದ್ದಾರೆ. ಅವರಿಗೂ ನನ್ನ ಅಭಿನಂದನೆಗಳು ಎಂದರು.

ಆರೋಪಿಗೆ ಉಗ್ರ ಶಿಕ್ಷೆಯಾಗುವಂತೆ, ಆತನನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸಲಾಗುತ್ತದೆ. ಆರೋಪಿಗೆ ತಕ್ಕ ಶಿಕ್ಷೆ ಆಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು ಎಂದರು.

Spread the love

Related Articles

Leave a Reply

Your email address will not be published.

Back to top button