
ಮುಂಬೈ: 2022ರ ಇಂಡಿಯನ್ ಪ್ರಿಮಿಯರ್ ಲೀಗ್ ನ ಪ್ಲೇ-ಆಫ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊರಬಿದ್ದಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ತಂಡ 97 ರನ್ ಗಳಿಗೆ ಆಲೌಟ್ ಆಯಿತು.
ಚೆನ್ನೈ ನೀಡಿದ 98 ರನ್ ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಗಳ ನಷ್ಟಕ್ಕೆ 103 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು.
ಐಪಿಎಲ್ 2022ರ ಆವೃತ್ತಿಯಲ್ಲಿ 12 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಚೆನ್ನೈ ಹಾಗೂ 12 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಜಯ ಗಳಿಸಿರುವ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಪ್ ನಿಂದ ಹೊರಬಿದ್ದಿವೆ.