Breaking Newsಕಲಬುರ್ಗಿಜಿಲ್ಲಾ ಸುದ್ದಿ
ತೊಗರಿಗೆ ಅವೈಜ್ಞಾನಿಕ ಬೆಂಬಲ ಬೆಲೆ: ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಕಲಬುರಗಿ: ತೊಗರಿ ಬೆಳೆಗೆ ಅವೈಜ್ಞಾನಿಕ ಬೆಂಬಲ ಬೆಲೆ ನಿಗಧಿ ಮಾಡಿದ್ದನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಶಾಸಕ ಬಿ ಆರ್ ಪಾಟೀಲ್ ನೇತೃತ್ವದಲ್ಲಿ ಸಂಸದ ಉಮೇಶ್ ಜಾಧವ್ ಅವರ ಮನೆ ಮುಂದೆ ಪ್ರತಿಭಟನೆ ಮಾಡಲಾಯಿತು.
ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ತೊಗರಿ ಬೆಳೆ ಹಾಳಾಗಿದೆ. ಇಳುವರಿಯೂ ಕಡಿಮೆಯಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ ₹6 ಸಾವಿರ ಬೆಂಬಲ ಬೆಲೆ ನಿಗದಿಪಡಿಸಿದೆ. ಕಡಿಮೆ ಅವಧಿಯಲ್ಲಿ ಬೆಳೆಯುವ ಹೆಸರು ಉದ್ದಿಗೆ ಉತ್ತಮ ಬೆಂಬಲ ಬೆಲೆ ಕೊಡುವ ಸರ್ಕಾರ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಭೌಗೋಳಿಕ ಮಾನ್ಯತೆ ಪಡೆದ ತೊಗರಿಗೆ ಉದ್ದೇಶ ಪೂರ್ವಕವಾಗಿ ಕಡಿಮೆ ಬೆಲೆ ನೀಡಿ ತೊಗರಿ ಬೆಳೆಗಾರರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾನಿರತರರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಬೆಂಬಲ ಬೆಲೆ ಮರುಪರಿಶೀಲಿಸಿ ಕ್ವಿಂಟಲ್ ತೊಗರಿಗೆ ಹತ್ತು ಸಾವಿರ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಆಗ್ರಹಿಸಿದರು.