Breaking NewsLatestರಾಜ್ಯಸುದ್ದಿ

ಆ್ಯಸಿಡ್ ದಾಳಿಗೆ ಒಳಗಾದವರ ಮಾಸಾಶನ 10ಸಾವಿರಕ್ಕೆ ಹೆಚ್ಚಳ: ಬೊಮ್ಮಾಯಿ

ಬೆಂಗಳೂರು: ಆಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ’ಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಆಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ. ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದರು.

Spread the love

Related Articles

Leave a Reply

Your email address will not be published.

Back to top button