Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತ ನಿಖಿಲ್​ ಕುಮಾರಸ್ವಾಮಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಖಾಡಕ್ಕಿಳಿಯೋದು ಬಹುತೇಕ ಖಚಿತವಾಗಿದೆ. ಆದರೆ, ಯಾವ ಕ್ಷೇತ್ರದಿಂದ ಎಂಬುದು ಇನ್ನೂ ಅಧಿಕೃತವಾಗಿಲ್ಲವಾದರೂ ರಾಮನಗರದತ್ತ ಎಲ್ಲರ ಚಿತ್ತ ಮೂಡಿದೆ.

ಅನಿತಾ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಕ್ಷೇತ್ರದಿಂದಲೇ ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ರಾಮನಗರದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ವೇ ಮಾಡಿಸಿದ್ದು, ಮುಖಂಡರ ಅಭಿಪ್ರಾಯವನ್ನೂ ಸಂಗ್ರಹಿಸಿದ್ದಾರಂತೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಭಲ ಪೈಪೋಟಿ ನೀಡಲಿದೆ. ಅನಿತಾ ಕುಮಾರಸ್ವಾಮಿಗಿಂತ ನಿಖಿಲ್ ಸ್ಪರ್ಧೆ ಮಾಡಿದರೆ ಸೂಕ್ತ ಎಂಬ ವರದಿ ಬಂದಿದೆಯಂತೆ.

ಹಾಗಾಗಿ ಅಂತಿಮವಾಗಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಲು ಎಚ್​ಡಿಕೆ ತಯಾರಿ ನಡೆಸಿದ್ದಾರಂತೆ. ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡುವ ಬದಲು 2ನೇ ಪಟ್ಟಿಯಲ್ಲಿ ಘೋಷಣೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಆಯಕ್ಟಿವ್​ ಆಗಿದ್ದು, ಪುತ್ರನಿಗಾಗಿ ಕ್ಷೇತ್ರ ಬಿಟ್ಟಕೊಡಲು ತಂದೆ- ತಾಯಿ ತೀರ್ಮಾನಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button