Breaking NewsLatestಕ್ರೈಂಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಸಚಿವ ಅಶ್ವಥ್ ನಾರಾಯಣ ವಿರುದ್ಧ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ, ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ, ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯುತ್ತಿದೆ, ಪ್ರತಿದಿನ ಆರೋಪಿಗಳು ಬಂಧನವಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನಿಷ್ಪಕ್ಷಪಾತ, ನಿಷ್ಠುರ ತನಿಖೆಯಾಗಬೇಕೆಂಬುದೇ ಸರ್ಕಾರದ ಉದ್ದೇಶ, ಕಾಂಗ್ರೆಸ್ ನವರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಸಂದೇಹ ಉಂಟಾಗುತ್ತಿದೆ, ಎಲ್ಲಿ ತಮ್ಮ ಬಣ್ಣ ಬಯಲಾಗುತ್ತದೋ ಎಂಬ ಭಯ ಅವರಿಗೆ ಶುರುವಾಗಿದೆ ಎಂದು ಕೂಡ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

ಸಚಿವ ಅಶ್ವಥ್ ನಾರಾಯಣ ವಿರುದ್ಧ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ, ಸುಖಾಸುಮ್ಮನೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಸಹ ಹೇಳಿದರು. ಜವಾಬ್ದಾರಿಯುತ ವಿರೋಧ ಪಕ್ಷದಲ್ಲಿದ್ದುಕೊಂಡು ಆರೋಪ ಮಾಡುವಾಗ ಸಣ್ಣ ಸಾಕ್ಷಿಯಾದರೂ ಬೇಕು, ಅದಕ್ಕೆ ಸಚಿವ ಅಶ್ವಥ್ ನಾರಾಯಣ ವಿರುದ್ಧ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ, ಹಿಟ್ ಅಂಡ್ ರನ್ ವರ್ತನೆ ಹೆಚ್ಚು ದಿನ ನಡೆಯುವುದಿಲ್ಲ ಎಂದರು.

Spread the love

Related Articles

Leave a Reply

Your email address will not be published.

Back to top button