Breaking NewsLatestಉಡುಪಿಜಿಲ್ಲಾ ಸುದ್ದಿ
ಉಡುಪಿಯಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿಲ್ಲ: ಆರೋಗ್ಯಾಧಿಕಾರಿ ಸ್ಪಷ್ಟನೆ

ಉಡುಪಿ: ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಟೊಮೆಟೋ ಜ್ವರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಟೊಮೆಟೋ ಜ್ವರ ಪ್ರಕರಣಗಳು ಕಾಣಿಸಿಕೊಂಡಿಲ್ಲ. ಆರೋಗ್ಯ ಇಲಾಖೆಯ ಸೂಚನೆಯಂತೆಯೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಸಂಪೂರ್ಣ ತಪಾಸಣೆ ನಡೆಯುತ್ತಿದ್ದು, ಕೇರಳ ರಾಜ್ಯದ ಪ್ರವಾಸಿಗರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಆರೊಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಸ್ಪಷ್ಟಪಡಿಸಿದ್ದಾರೆ.