ಜಮ್ಮು, ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ಬಲಪಡಿಸುವುದು ನಮ್ಮ ಆದ್ಯತೆ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವವನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ತ್ವರಿತಗತಿಯಲ್ಲಿ ಮತದಾನ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ
ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರ ಚುನಾಯಿತ ಸರ್ಕಾರ ಪಡೆಯಲಿದ್ದು, ಅಭಿವೃದ್ಧಿಯತ್ತ ಸಾಗಲಿದೆ ಎಂದಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಚುನಾವಣೆ ಮುಂತಾದ ರಾಜಕೀಯ ಚಟುವಟಿಕೆಗಳ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Our democracy’s biggest strength is the ability to sit across a table and exchange views. I told the leaders of J&K that it is the people, specially the youth who have to provide political leadership to J&K, and ensure their aspirations are duly fulfilled. pic.twitter.com/t743b0Su4L
— Narendra Modi (@narendramodi) June 24, 2021
ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದೇ ಇದೆ. ಆದರೆ ರಾಷ್ಟ್ರದ ಹಿತದೃಷ್ಟಿಯಿಂದ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇದು ಜಮ್ಮು ಕಾಶ್ಮೀರ ಜನರಿಗೆ ನೆರವಾಗಲಿದೆ. ವಿಶೇಷವಾಗಿ ಕಣಿವೆ ರಾಜ್ಯದ ಜನರಿಗೆ ಸುರಕ್ಷತೆ ವಾತಾವರಣ ನಿರ್ಮಿಸಬೇಕಿದೆ. ಸುರಕ್ಷತೆ ಪ್ರಮುಖ ಅದ್ಯತೆಯಾಗಿದೆ ಎಂದು ಮೋದಿ ಹೇಳಿದ್ದಾರೆ.
Our priority is to strengthen grassroots democracy in J&K. Delimitation has to happen at a quick pace so that polls can happen and J&K gets an elected Government that gives strength to J&K’s development trajectory. pic.twitter.com/AEyVGQ1NGy
— Narendra Modi (@narendramodi) June 24, 2021
ಸತತ 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಪ್ರಧಾನಿ ಮೋದಿ, ಸರ್ವಪಕ್ಷ ನಾಯಕರು ಮಕ್ತವಾಗಿ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಚರ್ಚೆ ನಡೆಸಿದ್ದಾರೆ. ಪ್ರತಿಯೊಬ್ಬರ ಮಾತುಗಳನ್ನು, ಮನವಿಯನ್ನು ಆಲಿಸಿದ್ದೇನೆ. ಈ ಅಭಿವೃದ್ಧಿ ಚರ್ಚೆಯಲ್ಲಿ ಪಾಲ್ಗೊಂಡ ನಾಯಕರಿಗೆ ಮೋದಿ ವಿಶೇಷ ಧನ್ಯವಾದ ಅರ್ಪಿಸಿದ್ದಾರೆ.