Breaking NewsLatestಕ್ರೈಂರಾಜ್ಯಸುದ್ದಿ

ಎಸ್ಕೇಪ್ ಆಗಲು ಆ್ಯಸಿಡ್ ನಾಗೇಶ್ ಯತ್ನ: ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಬೆಂಗಳೂರು: ಯುವತಿಯ ಮೇಲೆ ಆ್ಯಸಿಡ್ ಎರಚಿ ಕಳೆದ 16 ದಿನಗಳಿಂದ ಸ್ವಾಮೀಜಿ ವೇಷದಲ್ಲಿದ್ದ ಆರೋಪಿ ನಾಗೇಶ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ತಮಿಳುನಾಡಿನಿಂದ ಕರೆತರುವ ವೇಳೆ ಎಸ್ಕೇಪ್ ಆಗಲು ಪಯತ್ನಿಸಿದ್ದ ಆರೋಪಿಯ ಕಾಲಿಗೆ ಗುಂಡು ಹೊಡೆದ ಪೊಲೀಸರು ಆರೋಪಿಯನ್ನ ಕರೆ ತಂದಿದ್ದಾರೆ.

ಬೆಂಗಳೂರಿಗೆ ಕರೆ ತರುವ ವೇಳೆ ಎಸ್ಕೇಪ್ ಆಗಲು ಪಯತ್ನಿಸಿದ್ದ ನಾಗೇಶನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಗುಂಡೇಟು ನೀಡಿದ್ದು, ಸದ್ಯ ನಾಗೇಶ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೂತ್ರ ವಿಸರ್ಜನೆಗೆ ನಿಲ್ಲಿಸಿ ಎಂದು ನೈಸ್ ರೋಡಲ್ಲಿ ಕೇಳಿಕೊಂಡಿದ್ದ. ಇದಕ್ಕೆ ಅವಕಾಶ ಕೊಡದ ಪೊಲೀಸರು, ಬೆಂಗಳೂರಿನ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನ ಹಿಡಿಯಲು ಹೋದ ಕಾನ್ಸ್ ಟೇಬಲ್ ಮಹಾದೇವಯ್ಯರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿಯನ್ನ ಹಿಡಿಯಲು ಗಾಳಿಯಲ್ಲಿ ಗುಂಡು ಹಾರಿಸಿ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್‌ ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದರು. ಆದ್ರೆ ನಾಗೇಶ್ ಎಸ್ಕೇಪ್ ಆಗಲು ಪಯತ್ನಿಸಿದ್ದು ಈ ವೇಳೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗುಂಡೇಟು ತಿಂದ ಆರೋಪಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button