Breaking NewsLatestಜಿಲ್ಲಾ ಸುದ್ದಿತುಮಕೂರು

ಸಿದ್ದಗಂಗಾ ಮಠದಲ್ಲಿ ಧ್ಯಾನ ಮಾಡಿದ ರಾಹುಲ್ ಗಾಂಧಿ

ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸದಲ್ಲಿದ್ದು, , ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ.

ತುಮಕೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕ್ಯಾತ್ಸಂದ್ರ ಟೋಲ್ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಸಿದ್ದಗಂಗಾ ಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಗದ್ದುಗೆ ಬಳಿ ಕುಳಿತು ಕೆಲ ಹೊತ್ತು ಧ್ಯಾನದಲ್ಲಿ ತಲ್ಲೀನರಾಗಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ಎಂ.ಬಿ.ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಆರ್. ಧ್ರುವನಾರಾಯಣ ಸೇರಿದಂತೆ ಹಲವರು ಸಾಥ್ ನೀಡಿದರು. ಇದೇ ವೇಳೆ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published.

Back to top button