Breaking NewsLatestಜಿಲ್ಲಾ ಸುದ್ದಿತುಮಕೂರು

ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಣೆ

ತುಮಕೂರು: ಇಂದು ನಾಡಿನೆಲ್ಲೆಡೆ ಶ್ರೀರಾಮನವಮಿ ಸಂಭ್ರಮ ಮನೆ ಮಾಡಿದೆ. ಧರ್ಮಗಳನ್ನು ಮರೆತು ಹಿಂದೂ ಮುಸ್ಲಿಮರು ಪಾನಕ, ಮಜ್ಜಿಗೆ ನೀಡಿ ಹಬ್ಬವನ್ನು ಸಂಭ್ರಮಿಸಿದರು. ನಗರದ ಭದ್ರಮ್ಮ ಸರ್ಕಲ್ ನಲ್ಲೂ ಇದೇ ರೀತಿಯ ದೃಶ್ಯಗಳು ಕಂಡುಬಂದಿದೆ.

ರಾಮನವಮಿ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆ ವಿತರಿಸಿದ್ದಾರೆ. ಇದೇ ವೇಳೆ ಮುಸ್ಲಿಂ ಯುವಕರೂ ಸಹ ಅವರೊಂದಿಗೆ ಕೈ ಜೋಡಿಸಿದ್ದಾರೆ.

ಹಿಂದೂ ಮುಸ್ಲಿಂ ಕಾಂಗ್ರಸ್ ಕಾರ್ಯಕರ್ತರಿಂದ ಶ್ರೀರಾಮನವಮಿ ಆಚರಣೆ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟರೆ ಮುಸ್ಲಿಮರು ಟೋಪಿ ಧರಿಸಿ ಶ್ರೀರಾಮನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

Spread the love

Related Articles

Leave a Reply

Your email address will not be published.

Back to top button