RCB V/S PBKS: ರಾಯಲ್ ಚಾಲೆಂಜರ್ಸ್-ಪಂಜಾಬ್ ಕಿಂಗ್ಸ್ ಇಂದು ಮುಖಾಮುಖಿ

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಅನ್ನು ಸಂಜೆ 7:30 ಕ್ಕೆ ಎದುರಿಸಲಿದೆ.
ಪ್ಲೆ ಆಫ್ ಗೇರಲು ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ. ಟೂರ್ನಿಯಲ್ಲಿ ಆರ್ ಸಿಬಿ ಒಟ್ಟು 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಪಂಜಾಬ್ 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದು 8 ನೇ ಸ್ಥಾನದಲ್ಲಿದೆ. ಪಂಜಾಬ್ ಪ್ಲೇ ಆಫ್ ಪ್ರವೇಶಿಸಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳಲ್ಲಿ ಗೆಲ್ಲಲೇಬೇಕಿದೆ.
ಇನ್ನು ಕಳೆದ ರಾತ್ರಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಐದು ವಿಕೆಟ್ಗಳಿಂದ ಸೋಲಿಸಿತು. ಬ್ಯಾಟಿಂಗ್ಗೆ ಇಳಿದ ಚೆನ್ನೈ 16 ಓವರ್ಗಳಲ್ಲಿ 97 ರನ್ಗಳಿಗೆ ಆಲೌಟ್ ಆಯಿತು. ಉತ್ತರವಾಗಿ ಮುಂಬೈ ಕೇವಲ 14.5 ಓವರ್ಗಳಲ್ಲಿ ಐದು ವಿಕೆಟ್ಗಳನ್ನು ಕಳೆದುಕೊಂಡು ಕಡಿಮೆ ಗುರಿಯನ್ನು ಸುಲಭವಾಗಿ ಬದಲಾಯಿಸಿತು.