Breaking NewsLatestಮನರಂಜನೆಸಿನಿಮಾ

ಮೊಹಮ್ಮದ್ ನಲಪಾಡ್ ವಿರುದ್ಧ ರಮ್ಯಾ ಟ್ವೀಟ್ ವಾರ್

ನಟಿ ರಮ್ಯಾ ಸೋಷಿಯಲ್ ಮೀಡಿಯಾ ವಾರ್ ನಿನ್ನೆಯಿಂದ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಂಸದೆ ರಮ್ಯಾ ಇದೀಗ ಡಿಕೆ ಬಲಗೈ ಬಂಟ ಮೊಹಮ್ಮದ್ ನಲಪಾಡ್ ವಿರುದ್ಧ ಕಿಡಿಕಾರಿದ್ದಾರೆ. 

ಡಿಕೆ ಶಿವಕುಮಾರ್ ವಿರುದ್ಧ ರಮ್ಯಾ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಇಷ್ಟು ದಿನ ರಮ್ಯಾ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇದಕ್ಕಿದ್ದ ಹಾಗೆ ಪ್ರತ್ಯಕ್ಷರಾಗಿ ದೊಡ್ಡವರ ವಿರುದ್ಧ ಮಾತನಾಡುತ್ತಾ ತಾವು ಅಸ್ತಿತ್ವದಲ್ಲಿದ್ದೇನೆ ಎಂದು ತೋರಿಸಿಕೊಳ್ಳುತ್ತಾರೆ. ದಿಢೀರ್ ಎಂದು ಅವರು ಬಂದಿದ್ದು ಯಾಕೆ? ಇದನ್ನು ನಾವು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಟೀಕಿಸಿದ್ದರು. 

ಇದಕ್ಕೆ ಪ್ರತಿಕ್ರಿಯಿಸಿದ ರಮ್ಯಾ, ಮೊಹಮ್ಮದ್ ನಲಪಾಡ್ ಅವರ ಮೇಲಿರುವ ಗಂಭೀರ ಆರೋಪಗಳ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಜೊತೆಗೆ ಈ ಹುಡುಗ ಮೊಹಮ್ಮದ್ ನಲಪಾಡ್, ಶಾಸಕ ಹ್ಯಾರಿಸ್ ಪುತ್ರ ಯುವ ಕಾಂಗ್ರೆಸ್ ಅಧ್ಯಕ್ಷ(ಜಾಮೀನಿನ ಮೇಲೆ) ಹೊರಗೆ ತಿರುಗಾಡಿಕೊಂಡಿದ್ದು ಇತ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ. ವಾಹ್ ಎಂದು ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

ರಾಜಕೀಯ ನಾಯಕರು ಪಕ್ಷಾತೀತವಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಸಹಜ. ಕೆಲವರು ಬೇರೆ ಬೇರೆ ಪಕ್ಷದ ನಾಯಕರು ಮದುವೆ ಮೂಲಕ ಸಂಬಂಧಿಕರಾಗಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಅವರು ಎಂಬಿ ಪಾಟೀಲ್ ಅವರ ಬಗ್ಗೆ ನೀಡಿರುವ ಹೇಳಿಕೆ ನನಗೆ ಅಚ್ಚರಿ ಮೂಡಿಸಿದೆ. ಎಂಬಿ.ಪಾಟೀಲ್ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ ಎಂದು ನೇರವಾಗಿ ಡಿಕೆಶಿ ಹೇಳಿಕೆಗೆ ಟಾಂಗ್ ಕೊಟ್ಟಿದ್ದರು.

Spread the love

Related Articles

Leave a Reply

Your email address will not be published.

Back to top button