ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಬೆಂಗಳೂರು : ಉತ್ತರ ಪ್ರದೇಶದ ಪೊಲೀಸರು ಟ್ವಿಟ್ಟರ್ ಇಂಡಿಯಾದ ಮನೀಶ್ ಮಹೇಶ್ವರಿಗೆ ನೀಡಿದ್ದ ನೋಟಿಸ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮನೀಶ್ ಮಹೇಶ್ವರಿ ಕರ್ನಾಟಕ ಹೈಕೋರ್ಟ್ಗೆ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟ್ವಿಟರ್ ಇಂಡಿಯಾದ ಮುಖ್ಯಸ್ಥ ಮನೀಶ್ ಮಹೇಶ್ವರಿ ದೆಹಲಿ-ಉತ್ತರ ಪ್ರದೇಶ ಗಡಿ ಭಾಗದ ಪೊಲೀಸರು ತಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲೇ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ.
ಘಾಜಿಯಾಬಾದ್ನಲ್ಲಿ ಮುಸ್ಲಿಂ ವ್ಯಕ್ತಿಗೆ ಥಳಿಸಿದ ಪ್ರಕರಣಕ್ಕೆ ಕೋಮು ಬಣ್ಣ ನೀಡಿದ್ದ ಪ್ರಕರಣದಲ್ಲಿ ಮಹೇಶ್ವರಿ ಅವರ ವಿಚಾರಣೆ ನಡೆಯಬೇಕಿದೆ. ವಿಡಿಯೋ ಕಾಲ್ ಮೂಲಕ ವಿಚಾರಣೆ ಎದುರಿಸುವುದಾಗಿ ಮಹೇಶ್ವರಿ ಹೇಳಿದ್ದರು. ಆದರೆ ಬೆಳಿಗ್ಗೆ 10.30 ಕ್ಕೆ ಹಾಜರಿರಬೇಕೆಂದು ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದರು.