Breaking NewsLatestಉಡುಪಿಜಿಲ್ಲಾ ಸುದ್ದಿ

ಉಡುಪಿಯ ದೇವಸ್ಥಾನಗಳಿಗೆ ನಿರ್ಮಲಾ ಸೀತಾರಾಮನ್ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾದ ಬಳಿಕ ಉಡುಪಿಯ ಮೂರು ದೇಗುಲಗಳ ದರ್ಶನ ಮಾಡಲಿದ್ದಾರೆ.

ಉಡುಪಿಯಲ್ಲಿ ಮಣಿಪಾಲದ ಟಿ.ಎ.ಪೈ ಮ್ಯಾನೇಜ್‍ಮೆಂಟ್ ಇನ್‍ಸ್ಟಿಟ್ಯೂಟ್ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದು, ಬಳಿಕ ಉಡುಪಿಯ ಕುಕ್ಕಿಕಟ್ಟೆಯಲ್ಲಿ ಶ್ರೀ ವಿಶ್ವೇಶತೀರ್ಥ ಧಾಮವನ್ನು ಉದ್ಘಾಟಿಸಲಿದ್ದಾರೆ.

ಉಡುಪಿಯ ಕೃಷ್ಣಮಠಕ್ಕೆ ಭೇಟಿ ನೀಡಿ ಪರಿಹಾರ ಸ್ವಾಮೀಜಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಸಂಜೆ ಮಂಗಳೂರಿಗೆ ತೆರಳಿ ವಿಮಾನ ಮೂಲಕ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Spread the love

Related Articles

Leave a Reply

Your email address will not be published.

Back to top button