Breaking Newsರಾಜ್ಯ

ಲಾಕ್​ಡೌನ್ ಮತ್ತಷ್ಟು ಸಡಿಲಿಕೆ; ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ನಿರ್ಬಂಧ

ಬೆಂಗಳೂರು: ಕೋವಿಡ್ ಅನ್​ಲಾಕ್ 2ನೇ ಹಂತದಲ್ಲಿ ಮತ್ತಷ್ಟು ಸಡಿಲಿಕೆಗಳನ್ನು ಸರ್ಕಾರ ಘೋಷಣೆ ಮಾಡಿದೆ.

ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈಗಾಗಲೇ ಇರುವ ನಿರ್ಬಂಧನೆಗಳಲ್ಲಿ ಜೂನ್ 21ರಿಂದ ಜಾರಿಗೆ ಬರುವಂತೆ ಕೆಲವೊಂದು ಸಡಿಲಿಕೆಗಳ ಕುರಿತು ಸಿಎಂ ಯಡಿಯೂರಪ್ಪ ಪ್ರಕಟಿಸಿದರು.

ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 ಇಸೆ. ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದ್ದು. ಅಲ್ಲಿ ಲಾಕ್​ಡೌನ್ ನಿರ್ಬಂಧ ಮುಂದುವರಿಯಲಿದೆ.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾಗಿವೆ.

ಈ 13 ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಎಸಿ ಇಲ್ಲದೆ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆವರೆಗೆ ಶೇ 50ಗ್ರಾಹಕರಿಗೆ ಸೀಮಿತವಾಗಿರುವಂತೆ ಅವಕಾಶವಿರುತ್ತದೆ.

ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಲಾಗಿದೆ. ಲಾಡ್ಜ್​ಗಳಲ್ಲಿ ಮತ್ತು ರೆಸಾರ್ಟ್​ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಕಛೇರಿಗಳಿಗೆ ಶೇ 50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ಕೊಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಜಿಮ್​ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಇನ್ನು ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್‌ ಸಂಚಾರಕ್ಕೆ ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಅನುಮತಿ ನೀಡಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button