ರಾಷ್ಟ್ರೀಯವಾಣಿಜ್ಯವಿದೇಶಸುದ್ದಿಹಣಕಾಸು ವಿಚಾರ

2030ರ ವೇಳೆಗೆ 100 ಶತಕೋಟಿ ಡಾಲರ್ ದ್ವಿಪಕ್ಷೀಯ ವ್ಯಾಪಾರ

ಮೆಲ್ಬೋರ್ನ್​ (ಆಸ್ಟ್ರೇಲಿಯಾ): ಭಾರತ ಮತ್ತು ಆಸ್ಟ್ರೇಲಿಯಾ ದ್ವಿಪಕ್ಷೀಯ ವ್ಯಾಪಾರವನ್ನು 2030ರ ವೇಳೆಗೆ 100 ಶತಕೋಟಿ ಡಾಲರ್​ಗೆ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕ ಸಚಿವ ಪಿಯೂಷ್ ಗೋಯಲ್ ಬುಧವಾರ ಹೇಳಿದ್ದಾರೆ.

ಮೂರು ದಿನಗಳ ಭೇಟಿಗಾಗಿ ಆಸ್ಟ್ರೇಲಿಯಾದಲ್ಲಿರುವ ಗೋಯಲ್, ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಹಯೊಗಕ್ಕಾಗಿ ಒಪ್ಪಂದವನ್ನು ಮಾಡಿಕೊಳ್ಳಲು ಎರಡೂ ದೇಶಗಳು ಈಗಾಗಲೇ ಮುಂದುವರಿದ ಹಂತದಲ್ಲಿವೆ ಎಂದು ಹೇಳಿದ್ದಾರೆ. ಏಪ್ರಿಲ್ 2ರಂದು ಭಾರತ ಮತ್ತು ಆಸ್ಟ್ರೇಲಿಯಾದಲ್ಲಿರುವ ಗೋಯಲ್, ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಹಯೋಗಕ್ಕಾಗಿ ಒಪ್ಪಂದವನ್ನು ಮಾಡಿಕೊಳ್ಳಲು ಎರಡೂ ದೇಶಗಳು ಈಗಾಗಲೇ ಮುಂದುವರಿದ ಹಂತದಲ್ಲಿವೆ ಎಂದು ಹೇಳಿದರು.

ಎಪ್ರಿಲ್ 2ರಂದು ಭಾರತ ಮತ್ತು ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದವು. ಇದರ ಅಡಿಯಲ್ಲಿ ಎರಡೂ ದೇಶಗಳು ಹೆಚ್ಚಿನ ಸಂಖ್ಯೆಯ ಸರಕುಗಳಿಗೆ ಸುಂಕ ಮುಕ್ತ ಪ್ರವೇಶವನ್ನು ಒದಗಿಸುತ್ತಿವೆ ಮತ್ತು ಸೇವೆಗಳಲ್ಲಿ ವ್ಯಾಪಾರವನ್ನು ಉತ್ತೇಜಿಸಲು ನಿಯಮಗಳನ್ನು ಸಡಿಲಿಸುತ್ತಿವೆ.

Spread the love

Related Articles

Leave a Reply

Your email address will not be published. Required fields are marked *

Back to top button