ಬಿಮ್ಸ್ ಆಡಳಿತಾಧಿಕಾರಿಯಾಗಿ ಆದಿತ್ಯ ಆಮ್ಲನ್ ಬಿಸ್ವಾಸ್ ನೇಮಕ
24x7liveKannada
Mar 15, 2023 21:47
ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ಯಲ್ಲಿನ ಅವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳ ಬಂದ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿರಿಯ ಐಎಎಸ್ ಅಧಿಕಾರಿಯನ್ನು ಅಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಣ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಪ್ರಾದೇಶಿಕದ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರನ್ನು ಅಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ತಕ್ಷಣವೇ ಅವರು ಅಧಿಕಾರ ಸ್ವೀಕರಿಸಿ ಅಲ್ಲಿನ ವ್ಯವಸ್ಥೆ ಸರಿಪಡಿಸಲಿದ್ದಾರೆ ಎಂದರು.
ಅಲ್ಲದೆ ಚಿಕ್ಕೋಡಿ, ಸೇರಿದಂತೆ ಇತರೆ ಮೂರು ಕಡೆ ಟೆಸ್ಟಿಂಗ್ ಸೆಂಟರ್ ತೆರೆಯುವ ಬಗ್ಗೆ ಸೂಚನೆ ಕೊಟ್ಟಿದ್ದಾರೆ, ಜಿಲ್ಲೆಯ ಸಂಪೂರ್ಣ ವರದಿ ಪಡೆದಿದ್ದೇನೆ ಸಾರ್ವಜನಿಕರಿಗೆ ಅನುಕೂಲಕರ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.