ಬಾಗಲಕೋಟೆ
ಬಾಗಲಕೋಟೆ ಜಿಲ್ಲೆಯಲ್ಲಿಯೂ ಮಳೆ ಅಬ್ಬರ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದೆ.
ಬಾಗಲಕೋಟೆ ನಗರ ಸೇರಿದಂತೆ ಹಲವೆಡೆ ಅರ್ಧ ಗಂಟೆಯಿಂದಲೂ ಮಳೆ ಸುರಿಯುತ್ತಿದೆ. ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಇಂದಿನಿಂದ ಎರಡು ದಿನ ಕಾಲ ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಾಗಲಿದೆ.ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್ ಘೋಷಣೆಯಾಗಿದೆ.ಮಳೆ ಮುಂಗಾರು ಬಿತ್ತನೆಗೆ ಅನುಕೂಲವಾಗಲಿದೆ ಎನ್ನುತ್ತಿದ್ದಾರೆ ರೈತರು