ಬೆಳಗಾವಿ

ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಕಡ್ಡಾಯ; ಚೆಕ್ ಪೋಸ್ಟ್​ಗೆ ಜಿಲ್ಲಾಧಿಕಾರಿ ಭೇಟಿ

ಬೆಳಗಾವಿ: ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು.

ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಒಂದು ವೇಳೆ ಕರ್ನಾಟಕ ರಾಜ್ಯದ ನಿವಾಸಿಗಳು ಮಹಾರಾಷ್ಟ್ರದಿಂದ ಆಗಮಿಸಿದರೆ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿಯೇ ಅವರ ಮಾದರಿಯನ್ನು ಸಂಗ್ರಹಿಸಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಕಳುಹಿಸಬೇಕು. ವರದಿ ಬಂದ ತಕ್ಷಣವೇ ಸಂಬಂಧಿಸಿದ ವ್ಯಕ್ತಿಗಳಿಗೆ ಮಾಹಿತಿಯನ್ನು ನೀಡಬೇಕು. ನಂತರ ಅವರ ವರದಿಯನ್ನು ಕೂಡ ಅವರ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಆರೋಗ್ಯ ಇಲಾಖೆಯ ತಂಡಗಳಿಗೆ ನಿರ್ದೇಶನ ನೀಡಿದರು.

ರಾಜ್ಯಕ್ಕೆ ಆಗಮಿಸುವ ಸ್ಥಳೀಯ ಪ್ರಯಾಣಿಕರ ಕೋವಿಡ್ ತಪಾಸಣೆಗೆ ಅನುಕೂಲವಾಗುವಂತೆ ಚೆಕ್ ಪೋಸ್ಟ್ ಬಳಿಯೇ ಕೋವಿಡ್ ತಪಾಸಣಾ ಕೇಂದ್ರವನ್ನು ಸ್ಥಾಪಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button