ಬೆಳಗಾವಿ
ನದಿಯಲ್ಲಿ ಕೊಚ್ಚಿ ಹೋದ ರೈತ; ರಕ್ಷಣಾ ಕಾರ್ಯಾಚರಣೆ

ಬೆಳಗಾವಿ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಾರ್ಕಂಡೆಯ ನದಿಯ ಪ್ರವಾಹದಲ್ಲಿ ರೈತ ಓರ್ವ ಕೊಚ್ಚಿ ಹೋಗಿದ್ದು ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಬೆಳಗಾವಿಯಲ್ಲಿ ಸುರಿಯುವ ಧಾರಾಕಾರ ಮಳೆಗೆ ಮೊದಲ ಬಲಿ ಇದಾಗಿದೆ. ನಿನ್ನೆ ತಡ ರಾತ್ರಿ ಬೆಳಗಾವಿಯ ಮಾರ್ಕಂಡೆಯ ನದಿಯ ಪ್ರವಾಹದಲ್ಲಿ ಕಾಕತಿ ಗ್ರಾಮದ ಸಿದ್ರಾಯಿ ದೊಡ್ಡರಾಮಾ ಸುತಗಟ್ಟಿ (65) ಎಂಬ ರೈತ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ.
ಕೃಷಿ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿರುವಾಗ ನದಿಯ ಸೇತುವೆ ಬಳಿ ಕೈ ಕಾಲು ತೊಳೆದುಕೊಳ್ಳುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ.
ಸ್ಥಳಕ್ಕೆ ಬೆಳಗಾವಿ ಎಸಿ, ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಧಾರಾಕಾರ ಮಳೆ ಮತ್ತು ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಕಾರ್ಯಾಚರಣೆ ಅರ್ಧದಲ್ಲಿಯೇ ಮೊಟಕುಗೊಳಿಸಿಲಾಗಿತ್ತು, ಇಂದು ಬೆಳಿಗ್ಗೆ ಮತ್ತೆ ಶೋಧ ಕಾರ್ಯ ಮುಂದುವರಿಸಲಾಗಿದೆ