ಬೆಳಗಾವಿ

ಹಲವು ಕಾಮಗಾರಿಗಳಿಗೆ ಸತೀಶ್ ಜಾರಕಿಹೊಳಿ ಚಾಲನೆ, ಆಕ್ಸಿಜನ್ ಕಿಟ್ ವಿತರಣೆ

ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಅಡಿ ಮನೆಮನೆಗೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸೂಚನೆಯ ಮೇರೆಗೆ ಗ್ರಾಮದ ಮುಖಂಡರು ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, “ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ ಈ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ” ಎಂದು ಹೇಳಿದರು.

“ಜಲಜೀವನ್ ಮಿಷನ್ ಅಡಿ 1.61 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಅನುದಾನದಡಿ 2 ಲಕ್ಷ ಲೀ. ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ

ಆಕ್ಸಿಜನ್ ಕಿಟ್ ವಿತರಣೆ:
ಇದೇ ಸಂದರ್ಭದಲ್ಲಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿಯವರ ಅನುದಾನದಡಿ ಮತಕ್ಷೇತ್ರದ ಕಡೋಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಿಟ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖಂಡ ಮಲ್ಲಗೌಡ ಪಾಟೀಲ, ಗ್ರಾಮ ಪಂಚಾಯತನ ಅಧ್ಯಕ್ಷ, ಉಪಾಧ್ಯಕ್ಷರು, ಎಲ್ಲ ಸದಸ್ಯರು, ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button