ಜಿಲ್ಲಾ ಸುದ್ದಿ
ಕೋವಿಡ್ ಹೆಸರಲ್ಲಿ ಬಿಜೆಪಿ ಸರ್ಕಾರ ಲೂಟಿ: ರಾಜ್ಯ ಕಾಂಗ್ರೆಸ್ ಮಹಿಳಾ ಘಟಕ ಆರೋಪ

ಬಾಗಲಕೋಟೆ: ಬಿಜೆಪಿ ಸರ್ಕಾರ ಕೊರೊನಾ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ. ಇದು ಲೂಟಿ ಹೊಡೆಯುವ ಸರ್ಕಾರವಾಗಿದೆ ಎಂದು ಬಾಗಲಕೋಟೆಯಲ್ಲಿ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ವೀಣಾ ಕಾಶಪ್ಪನವರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾಗೆ ಸರಿಯಾಗಿ ಔಷಧಿ, ರೆಮ್ಡಿವಿಸರ್ ಇಂಜೆಕ್ಷನ್, ಬ್ಲ್ಯಾಕ್ ಫಂಗಸ್ ಗೂ ಇಂಜೆಕ್ಷನ್ ಸಿಗುತ್ತಿಲ್ಲ. ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದರು.
ಬಾಗಲಕೋಟೆ ಸಂಸದ ಪಿ ಸಿ ಗದ್ದಿಗೌಡರ ಕೊರೊನಾ ನಿಯಂತ್ರಣಕ್ಕೆ ಒಂದೇ ಒಂದು ಸಭೆ ನಡೆಸಿಲ್ಲ.ಒಂದು ಮಾಸ್ಕ್ ವಿತರಣೆ ಮಾಡಿಲ್ಲ.ಯಾರೋ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗುಂಪಿನಲ್ಲಿ ಗೋವಿಂದ ಎನ್ನುತ್ತಾರೆ ಎಂದು ಆರೋಪಿಸಿದರು.
ಜನರು ಸುರಕ್ಷಿತವಾಗಿರುವಂತೆ ವೀಣಾ ಕಾಶಪ್ಪನವರ್ ಮನವಿ ಮಾಡಿಕೊಂಡರು.