ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಉಡುಪಿ: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ. ಆದರೆ ಆ ಕಟ್ಟುನಿಟ್ಟಿನ ಕ್ರಮ ಕೇವಲ ಜನಸಾಮಾನ್ಯರಿಗೆ ಅನ್ವಯವಾಗುತ್ತದೆಯೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಕೋವಿಡ್ ನಿಯಮ ಗಾಳಿಗೆ ತೂರಿ ಸಭೆ ನಡೆಸುತ್ತಿದ್ದಾರೆ.
ಸರಕಾರದ ಆದೇಶದ ಪ್ರಕಾರದ ಯಾವುದೇ ಸಭೆ ಸಮಾರಂಭಕ್ಕೆ ಅವಕಾಶ ಇಲ್ಲ. ಆದರೆ ಶಾಸಕರ ಬಿಳಿಬೆಂಡೆಕಾಯಿ ಸಭೆಗೆ ಯಾವುದೆ ಕೋವಿಡ್ ನಿಯಮದ ಅಡಚಣೆ ಇಲ್ಲದೆ ಇರುವುದು ವಿಪರ್ಯಾಸವೇ ಸರಿ ಶಾಸಕರ ಸಭೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮಾಯವಾಗಿದ್ದು, ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೂ, ಇದುವರೆಗೆ ಯಾವುದೇ ಕ್ರಮ ಜರುಗಿಸದ ಜಿಲ್ಲಾಢಳಿತ ನಡೆ ಬಗ್ಗೆ ಸಾರ್ವಜನಿಕರ ವಲಯದಲ್ಲಿ ಪ್ರಶ್ನೆ ಎದ್ದಿದೆ.
ಕೋವಿಡ್ ನಿಯಮ ಉಲ್ಲಂಘಿಸುವ ಸಾಮಾನ್ಯ ಜನರಿಗೆ ದಂಡ ಬರೆ ಹಾಕುವ ಜಿಲ್ಲಾಡಳಿತಕ್ಕೆ ಇದ್ಯಾವುದೂ ಕಾಣಿಸುತ್ತಿಲ್ಲವೆ ಎನ್ನುವುದು ಸಾರ್ವಜನಿಕರ ಆಕ್ರೋಶವಾಗಿದೆ. ಹಾಗೂ ಶಾಸಕರ ಮೇಲೆ ಯಾವುದೇ ಕ್ರಮ ತೆಗೆದಕೊಳ್ಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಇದೀಗ ತಾರಕಕ್ಕೇರಿದೆ.