ಜಿಲ್ಲಾ ಸುದ್ದಿ
ಸ್ಥಳೀಯರಿಗೆ ಸಿಗುತ್ತಿಲ್ಲ ಲಸಿಕೆ: ದೇವನಹಳ್ಳಿ ಜನರ ಆಕ್ರೋಶ

ದೇವನಹಳ್ಳಿ: ಲಸಿಕೆಗಾಗಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ರಾಜಕಾರಣಿಗಳು ಬೆಂಬಲಿಗರಿಗೆ ಮತ್ತು ತಮಗೆ ಬೇಕಾದವರಿಗೆ ಫ್ರಂಟ್ ಲೈನ್ ವಾರಿಯರ್ಸ್ ಎಂದು ಲಸಿಕೆ ಹಾಕುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹೀಗೆ ಹೊರಗಿನವರಿಗೆ ಲಸಿಕೆ ಹಾಕುವ ಮೂಲಕ ಸ್ಥಳೀಯರಿಗೆ ಅನ್ಯಾಯ ಎಸಗುತ್ತಿದ್ದಾರೆಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ದೇವನಹಳ್ಳಿ ಪದವಿಪೂರ್ವ ಕಾಲೇಜಿನಲ್ಲಿ ತೆರೆಯಲಾಗಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ಇದು ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.