ಜಿಲ್ಲಾ ಸುದ್ದಿ
ಕಾಡಾನೆ ದಾಳಿ: ಓರ್ವ ಬಲಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಿರುಹುಣಸೆ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ಬಲಿಯಾಗಿರುವುದು ತಿಳಿದುಬಂದಿದೆ. ಗ್ರಾಮದ ತೋಟದ ಮಾಲೀಕ ರಾಜಣ್ಣ (59) ಮುಂಜಾನೆ ಆನೆ ತುಳಿತಕ್ಕೆ ಸಾವನ್ನಪ್ಪಿದ್ದಾರೆ.
ಮಲೆನಾಡು ಭಾಗವಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಹಲವು ವರ್ಷಗಳಿಂದ ನಿರಂತರ ಕಾಡಾನೆ ದಾಳಿಯಿಂದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಕಾಡಿನಿಂದ ಗ್ರಾಮಗಳಿಗೆ ಲಗ್ಗೆಯಿಸುತ್ತಿರುವ ಆನೆಗಳ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.