ಜಿಲ್ಲಾ ಸುದ್ದಿ
ಮೆಡಿಕಲ್ ಶಾಪ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ; ಔಷಧಿಗಳು ಬೆಂಕಿಗಾಹುತಿ

ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಮುಖ್ಯರಸ್ತೆಯಲ್ಲಿರುವ ಮಾನಸ ಮೆಡಿಕಲ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಬೆಲೆಬಾಳುವ ಔಷಧಿಗಳು ಬೆಂಕಿಗಾಹುತಿ ಆದ ಘಟನೆ ಸಂಭವಿಸಿದೆ. ಗುರುವಾರ ಬೆಳಗಿನ ಜಾವ 5:30 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ.
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದರು. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವುದಾಗಿ ತಿಳಿದು ಬಂದಿದೆ. ಬೆಂಕಿಯಿಂದ ಅಪಾರ ಪ್ರಮಾಣದ ಔಷಧಿಗಳು ಸುಟ್ಟು ಕರಕಲಾಗಿದೆ. ವಿದ್ಯುತ್ ವ್ಯತ್ಯಾಸದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಿರಂತರವಾಗಿ ಮುಂದುವರೆದಿತ್ತು. ಈ ಮೆಡಿಕಲ್ ಸ್ಟೋರ್ ಗೋಣಿಕೊಪ್ಪ ನಗರದ ಹೃದಯ ಭಾಗದಲ್ಲಿದೆ.