ಜಿಲ್ಲಾ ಸುದ್ದಿ
ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಆಹಾರ ವಿತರಣೆ

ಮಡಿಕೇರಿ ಕೋವಿಡ್ ಆಸ್ಪತ್ರೆಯ ರೋಗಿಗಳಿಗೆ, ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೆ ಮತ್ತು ಆಂಬ್ಯುಲೆನ್ಸ್ ಡ್ರೈವರ್ ಗಳಿಗೆ ಸುಮಾರು 400 ಆಹಾರ ಪೊಟ್ಟಣವನ್ನು ವಿತರಿಸಲಾಯಿತು.
ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನಿರ್ದೇಶನ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಘಟಕದ ಅಧ್ಯಕ್ಷರಾದ ವೈ. ಸೈಯದ್ ಅಹ್ಮದ್ ಆದೇಶದ ಮೇರೆಗೆ ನೆನ್ನೆ ರಾಜ್ಯ ವ್ಯಾಪ್ತಿ ಆಹಾರ ವಿತರಣಾ ದಿವಸ ಅಂಗವಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾದ ಎಂ.ಎ. ಉಸ್ಮಾನ್ ಸುಂಟಿಕೊಪ್ಪ ನೇತೃತ್ವದಲ್ಲಿ ಆಹಾರ ವಿತರಿಸಲಾಯಿತು.
ಈ ಕಾರ್ಯಕ್ರಮವನ್ನು ಶಾಸಕಿ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪರವರು ಆಸ್ಪತ್ರೆಯ ಸಿಬ್ಬಂದಿವರ್ಗದವರಿಗೆ ಉಪಹಾರ ಕೊಡುವ ಮುಖಾಂತರ ಚಾಲನೆ ನೀಡಿದರು.