ಜಿಲ್ಲಾ ಸುದ್ದಿ

ಕುಮಟಾ: ಬಿಜೆಪಿ ವತಿಯಿಂದ ಬಡ ಜನರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ

ಕಾರವಾರ: ದುಡಿದು ತಿನ್ನುವ ಶ್ರಮ ಜೀವಿಗಳ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಲಾಕ್ ಡೌನ್ ದಂತ ಸಂಕಷ್ಟದ ಸಮಯದಲ್ಲಿ ಆಹಾರ ಸಾಮಗ್ರಿಯನ್ನು ವಿತರಿಸುತ್ತಿದ್ದೇವೆ ಎಂದು ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.

ಅವರು ಕುಮಟಾ ತಾಲೂಕಿನ ಗಂಗಾವಳಿ ಗ್ರಾಮದ ಗಂಗಾಮಾತಾ ದೇವಾಲಯದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶ್ರಮಿಕ ವರ್ಗದವರಿಗೆ ಆಹಾರ ಸಾಮಗ್ರಿ ಒಳಗೊಂಡ ಕಿಟ್ ವಿತರಿಸಿ ಮಾತನಾಡಿದರು.

ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರಿಂದ ನಿಯಂತ್ರಣಕ್ಕೆ ಬಂದಿದೆ.ಕಳೆದ ವರ್ಷ ರಿಕ್ಷಾ ಚಾಲಕರಿಗೆ ಮತ್ತು ತರಕಾರಿ ಬೆಳೆಗಾರರಿಗೆ ಸಹಾಯ ಮಾಡಿದ್ದೇನೆ.ಈಗಲೂ ಕ್ಷೇತ್ರದ ಜನರ ಸಂಕಷ್ಟಕ್ಕೆ ನಿಂತಿದ್ದೇನೆ ಎಂದು ದಿನಕರ ಶೆಟ್ಟಿ ಅವರು ಹೇಳಿದರು.ಇದರಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ನೆರವು ಇದೆ ಎಂದರು.ಜನರು ಕೋವಿಡ್ ನಿಯಮಗಳನ್ನು ಅನುಸರಿಸಿ ಸರಕಾರಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.

ಬಿ.ಜೆ.ಪಿ.ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿಯ ವರು ಕೋವಿಡ್ ಲಸಿಕೆ ಪ್ರತಿಯೊಬ್ಬರಿಗೂ ಸಿಗುವಂತೆ ಲಸಿಕಾ ಅಭಿಯಾನ ಆರಂಭಿಸಿ ದ್ದಾರೆ ಎಂದರು.ಮಹಾಮಾರಿ ಕೊರೋನಾದಿಂದ ತೊಂದರೆಗೆ ಒಳಗಾದ ಬಡ ಕುಟುಂಬಗಳಿಗೆ ಪಕ್ಷದ ವತಿಯಿಂದ ಭೂತ ಮಟ್ಟದಲ್ಲಿ ಆಹಾರ ಸಾಮಗ್ರಿ ಕಿಟ್ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು.

ಬಿ.ಜೆ.ಪಿ.ಪಕ್ಷದ ಜಿಲ್ಲಾ ಪ್ರಭಾರಿ ನಾಗರಾಜ ನಾಯಕ ತೊರ್ಕೆ ಮಾತನಾಡಿ,ತಮ್ಮ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸಿ ನೆರವಾಗುವ ಶಾಸಕ ದಿನಕರ ಶೆಟ್ಟಿಯವರ ಕಾರ್ಯ ಅಭಿನಂದನಾರ್ಹವಾಗಿದೆ ಎಂದರು.

ಈ ವೇಳೆ ನಾಡುಮಾಸ್ಕೇರಿ ಗ್ರಾಂ.ಪಂ.ಅಧ್ಯಕ್ಷೆ ಧನಶ್ರೀ ಅಂಕೋಲೆಕರ,ಗೋಕರ್ಣ ಗ್ರಾಂ.ಪಂ.ಅಧ್ಯಕ್ಷ ಮಂಜುನಾಥ ಜನ್ನು,ತೊರ್ಕೆ ಗ್ರಾಂ.ಪಂ.ಅಧ್ಯಕ್ಷ ಆನಂದು ಕವರಿ,ಸದಸ್ಯ ರಾಜೇಶ ನಾಯಕ, ನಾಗರಾಜ ತಾಂಡೇಲ್,ದಯಾ ಮೆಹ್ತಾ,
ಉದ್ಯಮಿ ನಾಗರಾಜ ಹಿತ್ತಲಮಕ್ಕಿ,ಸ್ಥಳೀಯ ಪಕ್ಷದ ಕಾರ್ಯಕರ್ತರು ಉಪಸ್ಥಿತ ರಿದ್ದರು.

ನಾಡುಮಾಸ್ಕೇರಿ ಗ್ರಾ.ಪಂ.ವ್ಯಾಪ್ತಿಯ ಗಂಗಾವಳಿ ಮತ್ತು ದುಬ್ಬನಶಶಿಯ ಗ್ರಾಮಗಳಿಗೆ ೩೫೦ ಕಿಟ್ ವಿತರಿಸಲಾಗಿದೆ.ಮುಂದಿನ ದಿನಗಳಲ್ಲಿ ಗಂಗೆಕೊಳ್ಳ, ಹಾರುಮಾಸ್ಕೇರಿ,ಭಾವಿಕೊಡ್ಲ ಭಾಗದ ೫೦೦ ಬಡಕುಟುಂಬಕ್ಕೆ ಆಹಾರ ಸಾಮಗ್ರಿ ಕಿಟ್ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Spread the love

Related Articles

Leave a Reply

Your email address will not be published. Required fields are marked *

Back to top button