ಹುಬ್ಬಳ್ಳಿಯಲ್ಲಿ ಇಬ್ಬರು ಪ್ರತ್ಯೇಕ ಸ್ಥಳದಲ್ಲಿ ನೇಣಿಗೆ ಶರಣು

ಹುಬ್ಬಳ್ಳಿ: ಬೆಳ್ಳಂಬೆಳಗ್ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಸ್ಥಳಗಳಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಹಳೇ ಬಸ್ ನಿಲ್ದಾಣದ ಬಳಿ ಒಬ್ಬ ಯುವಕ ನೇಣಿಗೆ ಶರಣಾಗಿದ್ದು, ಮತ್ತೆ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿಯು ಒಬ್ಬರು ನೇಣು ಹಾಕಿಕೊಂಡಿದ್ದಾರೆ. ಇಂದು ಮುಂಜಾನೆಯೇ ಎರಡು ಆತ್ಮ ಹತ್ಯ ಪ್ರಕರಣಗಳು ಬೆಳಕಿಗೆ ಬಂದಿದ್ದು, ಎರಡು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಎರಡು ಪ್ರಕರಣಗಳಲ್ಲಿ ನೇಣು ಹಾಕಿಕೊಂಡ ವ್ಯಕ್ತಿಗಳು ಮೃತದೇಹ ಕಾಲುಗಳು ನೆಲಕ್ಕೆ ತಾಗುತ್ತಿದ್ದು, ಹಳೇ ಬಸ್ ನಿಲ್ದಾಣದ ಜಾಹೀರಾತು ಫಲಕದ ಹಿಂಭಾಗದಲ್ಲಿ ಟೆಲಿಪೋನ್ ವೈಯರ್ ನಿಂದ ನೇಣು ಹಾಕಿಕೊಂಡಿದ್ದಾರೆ, ಮಾಹಿತಿ ಮೇರೆಗೆ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ಕೈಗೊಂಡು, ಶವವನ್ನ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ
ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೇಣು ಹಾಕಿಕೊಂಡು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಿದ್ದು, ಎರಡೂ ಘಟನೆಗಳ ಕುರಿತಂತೆ ಈಗ ಹಳೇ ನಸ್ ನಿಲ್ದಾಣದ ವ್ಯಕ್ತಿ ಕುರಿತು ಉಪನಗರ ಪೊಲೀಸ ಠಾಣೆ ಹಾಗೂ ರೈಲ್ವೆ ಪಾರ್ಕಿಂಗ್ ನಿಲ್ದಾಣದಲ್ಲಿ ನೇಣು ಹಾಕಿಕೊಂಡ ಘಟನೆಯ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರರಣಗಳು ದಾಖಲಾಗಿವೆ.